ಕರ್ನಾಟಕ

karnataka

ETV Bharat / briefs

2.5 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ತಿಪ್ಪಾರೆಡ್ಡಿ.. - ಚಿತ್ರದುರ್ಗ ಲೋಕೋಪಯೋಗಿ ಇಲಾಖೆ

300 ರಿಂದ 400 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. 2021 ಮಾರ್ಚ್‍ನೊಳಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸ.

Chitradurga Drive to various works
Chitradurga Drive to various works

By

Published : Jun 1, 2020, 5:02 PM IST

ಚಿತ್ರದುರ್ಗ :ಲೋಕೋಪಯೋಗಿ ಇಲಾಖೆಯ ವತಿಯಿಂದ ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿಯವರು ಚಾಲನೆ ನೀಡಿದರು.

ನಗರದ ಶಿಲ್ಪಭವನದ ಕಾಂಪೌಂಡ್ ನಿರ್ಮಾಣ ಹಾಗೂ ನೂತನ ಲೋಕೋಪಯೋಗಿ ಕಚೇರಿಯ ಕಟ್ಟಡ ಕಾಮಗಾರಿ ಸೇರಿ ವಿವಿಧ ಅಭಿವೃದ್ಧಿ ಯೋಜನೆಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆ ಕಚೇರಿ ತುಂಬಾ ಹಳೆಯದಾಗಿದೆ. ಉತ್ತಮ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಬೇಕು ಎಂಬ ಉದ್ದೇಶವಿದೆ. ಅಲ್ಲದೆ ರಸ್ತೆ ಅಗಲೀಕರಣ ಸಂದರ್ಭದಲ್ಲಿ ತೆರವುಗೊಳಿಸಲಾದ ಕಚೇರಿ ಕಾಂಪೌಂಡ್‌ನ ಮರು ನಿರ್ಮಾಣದ ಕೆಲಸ ಸೇರಿ ಸುಮಾರು 2.5 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ನಡೆಸುವುದಾಗಿ ತಿಳಿಸಿದರು.

ಲೋಕೋಪಯೋಗಿ ಕಚೇರಿಯ ಕಾಂಪೌಂಡ್‍ನಲ್ಲಿ ಹೆಚ್ಚು ಮರ ಗಿಡಗಳನ್ನು ಬೆಳೆಸುವಂತೆ ಇಲಾಖೆಯ ಇಂಜಿನಿಯರ್‌ಗಳಿಗೆ ಸೂಚಿಸಿದರು. 300 ರಿಂದ 400 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. 2021 ಮಾರ್ಚ್‍ನೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details