ಕೋಲಾರ:ಎಲ್ಲೆಡೆ ವೀಕೆಂಡ್ ಕರ್ಫ್ಯೂ ಜೋರಾಗಿದ್ದು, ಕೋಲಾರ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಧಿಕ್ಕರಿಸಿ ಬೀದಿಗಿಳಿದಿದ್ದ ನೂರಾರು ಬೈಕ್ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಕೋಲಾರ ಸೇರಿದಂತೆ ಮಾಲೂರು, ಕೆಜಿಎಫ್ ಮುಂತಾದ ಕಡೆ ಅನಗತ್ಯವಾಗಿ ಓಡಾಡುತ್ತಿದ್ದ ನೂರಕ್ಕೂ ಹೆಚ್ಚು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಓಡಾಟ ಹಿನ್ನೆಲೆ ಕ್ರಮ ಕೈಗೊಂಡಿದ್ದು, ಕರ್ಫ್ಯೂ ಇದ್ದರೂ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ಫುಲ್ ಡ್ರಿಲ್ ನಡೆಸಿದ್ದಾರೆ. ಅಲ್ಲದೆ ತಮ್ಮ ಬೈಕ್ಗಳಿಗಾಗಿ ಪೊಲೀಸ್ ಠಾಣೆಗಳ ಎದುರು ನೂರಾರು ಬೈಕ್ ಸವಾರರು ಜಮಾಯಿಸಿದ್ದಾರೆ.
ಕೋಲಾರದಲ್ಲಿ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಇನ್ನು ವೀಕೆಂಡ್ ಕರ್ಫ್ಯೂ ಪರಿಶೀಲನೆ ನಡೆಸಿದ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅನಗತ್ಯವಾಗಿ ಓಡಾಟ ಹಿನ್ನೆಲೆ ಬೈಕ್ಗಳನ್ನ ಸೀಜ್ ಮಾಡಲಾಗಿದ್ದು, ಇಂದು ಬೆಳಗ್ಗೆಯಿಂದ ಜಿಲ್ಲೆಯ ವಿವಿಧೆಡೆ ಬೈಕ್ಗಳನ್ನು ಸೀಜ್ ಮಾಡಿರುವುದಾಗಿ ಹೇಳಿದ್ದಾರೆ. ಅಲ್ಲದೆ ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಓಡಾಟ ಹಿನ್ನೆಲೆ ಈ ಕ್ರಮ ಕೈಗೊಂಡಿದ್ದು, ಅನಗತ್ಯ ಓಡಾಟ ಮಾಡಿದ್ರೆ ಬೈಕ್ ಸೀಜ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಇನ್ನು ಇದೇ ವೇಳೆ ಕೋಲಾರದ ಪ್ರಮುಖ ರಸ್ತೆಗಳಿಗೆ ಡಿಸಿ ಸೆಲ್ವಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಕೋಲಾರದ ಅಮ್ಮವಾರಿಪೇಟೆ, ಎಂಬಿ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರದಲ್ಲಿ ವೀಕೆಂಡ್ ಕರ್ಫ್ಯೂ ಸಕ್ಸಸ್ ಆಗಿದ್ದು, ಅನ್ಯಗತ್ಯವಾಗಿ ಓಡಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಎಲ್ಲಾ ಕಡೆ ಬ್ಯಾರಿಕೇಡ್ ಹಾಕಲಾಗಿದೆ. ಕೋಲಾರದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಪರಿಣಾಮ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ರು.