ಭೋಪಾಲ್:ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ಹೊರಬರುತ್ತಿದ್ದಂತೆ ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿದ್ದು, ಕಾಂಗ್ರೆಸ್ ನೇತೃತ್ವದ ಕಮಲ್ನಾಥ್ ಸರ್ಕಾರಕ್ಕೆ ಬಹುಮತವಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.
ಇದೇ ವಿಷಯವನ್ನಿಟ್ಟುಕೊಂಡು ಬಿಜಿಪಿ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ಗೆ ಪತ್ರ ಬರೆದಿದ್ದು, ವಿಶೇಷ ಅಧಿವೇಶನ ಕರೆಯುವಂತೆ ಮನವಿ ಮಾಡಿಕೊಂಡಿದ್ದಾರೆ. ಬಿಜೆಪಿ ಪ್ರತಿಪಕ್ಷ ನಾಯಕ ಗೋಪಾಲ್ ಭಾರ್ಗವ್ ಈ ಮಾಹಿತಿ ಹೊರಹಾಕಿದ್ದು, ಅಧಿವೇಶನದಲ್ಲಿ ರೈತರ ಸಾಲಮನ್ನಾ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕಾಗಿದ್ದು, ಈ ವೇಳೆ ಬಹುಮತ ಕೂಡ ಸಾಬೀತುಪಡಿಸಬೇಕಾಗಿದೆ ಎಂದು ಭಾರ್ಗವ್ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ಎಸ್ಪಿ ಹಾಗೂ ಬಿಎಸ್ಪಿಯ ಓರ್ವ ಶಾಸಕ, ನಾಲ್ವರು ಪಕ್ಷೇತರ ಶಾಸಕರು ಬೆಂಬಲ ಸೂಚಿಸಿದ್ದು, ಇದೀಗ ಅವರ ನಡುವೆ ಒಳಜಗಳ ಶುರುವಾಗಿವೆ. ಹೀಗಾಗಿ ವಿಶೇಷ ಅಧಿವೇಶನದಲ್ಲಿ ಬಹುಮತ ಸಾಬೀತು ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.