ಕರ್ನಾಟಕ

karnataka

ETV Bharat / briefs

ಲಾಕ್​​​​ಡೌನ್​​ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಟೀಲ್ ಸೂಚನೆ

ಹಳ್ಳಿಗಳಿಗೆ ಸೋಂಕು ಪ್ರವೇಶಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಜಿಲ್ಲೆಗಳಲ್ಲಿ ಲಾಕ್​ಡೌನ್ ಪರಿಣಾಮಕಾರಿ ಜಾರಿಗೆ ನೀವೆಲ್ಲ ಜವಾಬ್ದಾರಿ ತೆಗೆದುಕೊಳ್ಳಲೇಬೇಕು.

By

Published : May 10, 2021, 4:45 PM IST

Nalin Kumar Kateel
Nalin Kumar Kateel

ಬೆಂಗಳೂರು:ಇಂದಿನಿಂದ 14 ದಿನಗಳ ಕಾಲ ಜಾರಿಯಾಗಿರುವ ಲಾಕ್​ಡೌನ್ ಅನುಷ್ಠಾನ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದಿದ್ದು, ಸಂಜೆ ಸಿಎಂ ಯಡಿಯೂರಪ್ಪ ಕಚೇರಿಗೆ ಭೇಟಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ವಿಚಾರ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರವಾಣಿ ಕರೆ ಮಾಡಿ ಲಾಕ್​ಡೌನ್​​ ಅನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಜಿಲ್ಲೆಗಳಲ್ಲೇ ಇದ್ದು ಪರಿಣಾಮಕಾರಿಯಾಗಿ ಜಾರಿಯಾಗುವ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಹಳ್ಳಿಗಳಿಗೆ ಸೋಂಕು ಪ್ರವೇಶಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಜಿಲ್ಲೆಗಳಲ್ಲಿ ಲಾಕ್​ಡೌನ್ ಪರಿಣಾಮಕಾರಿ ಜಾರಿಗೆ ನೀವೆಲ್ಲಾ ಜವಾಬ್ದಾರಿ ತೆಗೆದುಕೊಳ್ಳಲೇಬೇಕು ಎಂದು ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ವಿಚಾರ ಸಂಬಂಧ ಸಂಜೆ 4 ಗಂಟೆಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಾಹನ ಓಡಾಟಕ್ಕೆ ಪೂರ್ಣ ಕಡಿವಾಣ, ಬೆಂಗಳೂರಿನಲ್ಲಿ ಪರಿಸ್ಥಿತಿ ಸುಧಾರಣೆ, ಜಿಲ್ಲಾ ಉಸ್ತುವಾರಿ ಸಚಿವರಿಗಳಿಗೆ ನಿರ್ದೇಶನ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.

For All Latest Updates

ABOUT THE AUTHOR

...view details