ಬೆಂಗಳೂರು: ಬಿಬಿಎಂಪಿ ಉಪಚುನಾವಣೆಯಲ್ಲಿ ಜೆಡಿಎಸ್ ಕಾರ್ಯಕರ್ತರ ವರ್ತನೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸರ್ವಾಧಿಕಾರದ ದೋರಣೆಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
ಸಿಎಂ ಪ್ರೇರಣೆಯಿಂದ ಜೆಡಿಎಸ್ ಕಾರ್ಯಕರ್ತರ ಗೂಂಡಾಗಿರಿ: ಬಿಜೆಪಿ ಟ್ವೀಟ್
ಬಿಬಿಎಂಪಿ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪ್ರೇರಣೆಯಿಂದ ಜೆಡಿಎಸ್ ಕಾರ್ಯಕರ್ತರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಟ್ವೀಟ್ ಸಂದೇಶ
ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಅವರು ಬಿಜೆಪಿ ಕಾರ್ಯಕರ್ತರನ್ನ ಬೆದರಿಸುತ್ತಿದ್ದಾರೆ. ಬಿಬಿಎಂಪಿ ಕಾವೇರಿಪುರ ವಾರ್ಡ್ನ ಉಪಚುನಾವಣೆಯಲ್ಲಿ ಗೂಂಡಾಗಿರಿ ನಡೆಸಲಾಗುತ್ತಿದೆ.ಹೆಚ್.ಡಿ. ಕುಮಾರಸ್ವಾಮಿ ಅವರ ಸರ್ವಾಧಿಕಾರಿ ಆಡಳಿತದ ಪ್ರೇರಣೆಯಿಂದಾಗಿ ಗೂಂಡಾಗಿರಿ ನಡೆಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬಿಜೆಪಿ ಆರೋಪಿಸಿದೆ.