ಕರ್ನಾಟಕ

karnataka

ETV Bharat / briefs

ಸಿದ್ದೇಶ್ವರ್ ಗೆಲುವು: ಶಾಸಕ ಎಸ್.ಎ.ರವೀಂದ್ರನಾಥ್ ಸಂಭ್ರಮಾಚರಣೆ - KN_DVG_08_23_MLA_RAVINDRANATH_REACT_KA10016

ಲೋಕಸಭಾ ಚುನಾವಣೆಯಲ್ಲಿ ಜಿ.ಎಂ.ಸಿದ್ದೇಶ್ವರ್ ಭರ್ಜರಿ ಜಯ ದಾಖಲಿಸಿದ್ದಾರೆ. ಅವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಆಶಯ ವ್ಯಕ್ತಪಡಿಸಿದರು.

ಶಾಸಕ ಎಸ್.ಎ.ರವೀಂದ್ರನಾಥ್

By

Published : May 28, 2019, 2:08 PM IST

ದಾವಣಗೆರೆ:ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜಿ.ಎಂ.ಸಿದ್ದೇಶ್ವರ್ ಗೆದ್ದಿದ್ದು, ಕೇಂದ್ರ ಸರ್ಕಾರದಲ್ಲಿ ಪ್ರಬಲ ಮಂತ್ರಿಯಾಗಲಿ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಆಶಯ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ದೇಶದಲ್ಲಿ ದಿಗ್ವಿಜಯ ಸಾಧಿಸಿದ್ದಾರೆ. ಅದರಂತೆ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದೇಶ್ವರ್ ಜಯಶೀಲರಾಗಿದ್ದಾರೆ. ನಮ್ಮ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ 50 ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿದ್ದೇವೆ. ಸಿದ್ದೇಶ್ವರ್ ಅವರು ಕೆಂದ್ರ ಸರ್ಕಾರದಲ್ಲಿ ಪ್ರಬಲ ಸಚಿವರಾಗಲಿ ಎಂದು ಹಾರೈಸಿದರು

For All Latest Updates

TAGGED:

ABOUT THE AUTHOR

...view details