ಮಹಾರಾಷ್ಟ್ರ :ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ಮುಂದುರಿಸಿದೆ. ವಶಕ್ಕೂ ಮುನ್ನ ಸಿಬಿಐ ದೇಶ್ಮುಖ್ಗೆ ಸಂಬಂಧಪಟ್ಟ ಮುಂಬೈನ ವಿವಿಧ ಸ್ಥಳಗಳಲ್ಲಿ ಸಿಬಿಐ ಮೊಕ್ಕಾಂ ಹೂಡಿ, ತೀವ್ರ ಶೋಧ ನಡೆಸಿತ್ತು.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್‌ಸಿಂಗ್ ಅವರ ಆರೋಪಗಳನ್ನು ಪರಿಶೀಲಿಸುವಂತೆ ಬಾಂಬೆ ಹೈಕೋರ್ಟ್‌ನ ಆದೇಶದ ಮೇರೆಗೆ ತನಿಖಾ ಸಂಸ್ಥೆ ಪ್ರಾಥಮಿಕ ತನಿಖೆ ನಡೆಸಿದೆ.
ವಿಚಾರಣೆಯ ಸಮಯದಲ್ಲಿ ಸಿಬಿಐ, ದೇಶಮುಖ್ ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನಿಯಮಿತವಾಗಿ ಪ್ರಕರಣ ದಾಖಲಿಸಿದೆ.
ಈ ಮೂಲಕ ಔಪಚಾರಿಕ ತನಿಖೆ ಪ್ರಾರಂಭಿಸಲು ಸಾಕಷ್ಟು ಪ್ರಾಥಮಿಕ ದಾಖಲೆಗಳನ್ನು ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿದ ನಂತರದಲ್ಲಿ ಸಿಬಿಐ ಮುಂಬೈನ ಹಲವಾರು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದು, ಇದೀಗ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.