ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಭಾರಿ ಬಹುಮತಗಳ ಅಂತರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ನಗರದ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಗೆಲುವಿಗೆ ಕಾರಣವಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಶಿವಮೊಗ್ಗವನ್ನು ಮಾದರಿ ಕ್ಷೇತ್ರವಾಗಿ ರೂಪಿಸುವೆ: ಬಿ ವೈ ರಾಘವೇಂದ್ರ - etv bharata
ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ವಿಜೇತ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಜನರಿಗೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದರು. ಕ್ಷೇತ್ರದ ಅಭಿವೃದ್ಧಿಗೆ ಮುಂದಾಗುವ ಭರವಸೆ ನೀಡಿದರು.
ಬಿಜೆಪಿ ವಿಜೇತ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು
ಸತತವಾಗಿ ಪರಿಶ್ರಮಿಸಿ ಪ್ರಚಾರ ಕೈಗೊಂಡ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ ಅವರು, ಸ್ವತಂತ್ರ ಬಂದ ನಂತರದಲ್ಲಿ ಈ ಬಾರಿ ಅತಿ ಹೆಚ್ಚು ಮತದಾನ ಜಿಲ್ಲೆಯಲ್ಲಾಗಿತ್ತು. ಇಡೀ ದೇಶದಲ್ಲಿ ಮೋದಿ ಅವರ ನೇತೃತ್ವ ಬಯಸುತ್ತಿದೆ ಎಂದರು.
ಈ ಗೆಲುವು ಆಕಸ್ಮಿಕವಲ್ಲ ಸಂಘಟನೆಯ ಗೆಲುವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕಡೆ ಗಮನ ನೀಡಬೇಕು. ಹಲವು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸುತ್ತೇನೆ ಎಂದು ಭರವಸೆ ನೀಡಿದರು.