ಬೆಂಗಳೂರು:ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ನಿಲ್ಲಿಸಿದ್ದ ಬೈಕ್ಗಳನ್ನು ಕದಿಯುತ್ತಿದ್ದ ಖದೀಮನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ನಿಲ್ಲಿಸಿದ್ದ ಬೈಕ್ ಕಳ್ಳತನ: ಖದೀಮನ ಬಂಧಿಸಿದ ಪೊಲೀಸರು - Bike theft News
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಬ್ಯಾಡರಹಳ್ಳಿ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.
ಬೈಕ್ ಕಳ್ಳತನ
ನಿಖಿಲ್(21) ಬಂಧಿತ ಖದೀಮ. ಈತ ಬ್ಯಾಡರಹಳ್ಳಿ ಸಮೀಪ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ. ಬಳಿಕ ಮಾಲೀಕರು ನೀಡಿದ ದೂರನ್ನು ದಾಖಲಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ. ಈ ವೇಳೆ ಇತರ ಬೈಕ್ ಕಳ್ಳತನ ಎಸಗಿದ್ದ ಪ್ರಕರಣ ಕೂಡ ಬೆಳಕಿಗೆ ಬಂದಿದೆ.
ಬಂಧಿತ ನಿಖಿಲ್ನಿಂದ 2.65 ಲಕ್ಷ ರೂ. ಮೌಲ್ಯದ 6 ಬೈಕ್ ಜಪ್ತಿ ಮಾಡಲಾಗಿದೆ. ಈ ಹಿಂದೆ ಬ್ಯಾಡರಹಳ್ಳಿ ಮತ್ತು ಕಾಮಾಕ್ಷಿಪಾಳ್ಯದಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.