ಕರ್ನಾಟಕ

karnataka

ETV Bharat / briefs

ಜಮ್ಮುಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಮುಂದುವರಿಕೆ: ಕೇಂದ್ರ ಸಂಪುಟ ನಿರ್ಧಾರ - ನಿರ್ಧಾರ

ಜಮ್ಮು-ಕಾಶ್ಮೀರದಲ್ಲಿ ಈಗಾಗಲೇ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ಅದನ್ನು ಮುಂದಿನ ಆರು ತಿಂಗಳ ಕಾಲ ಮುಂದುವರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ತಿಳಿಸಿದ್ದಾರೆ.

ಪ್ರಕಾಶ್​ ಜಾವ್ಡೇಕರ್​​

By

Published : Jun 12, 2019, 8:40 PM IST

ನವದೆಹಲಿ:ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆಯುವುದರೊಂದಿಗೆ ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ನೇತೃತ್ವದ ಸರಕಾರ ಪತನಗೊಂಡಿತ್ತು. ಹೀಗಾಗಿ ಈಗಾಗಲೇ ಕಣಿವೆ ನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ಮುಂದಿನ ಆರು ತಿಂಗಳ ಕಾಲ ಮಂದುವರೆಯಲಿದೆ.

ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಪತ್ರಿಕಾಗೋಷ್ಟಿ

ಕೇಂದ್ರ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಮಾಹಿತಿ ನೀಡಿದ್ದಾರೆ. ಈಗಾಗಲೇ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಇದ್ದು, ಮುಂದಿನ ತಿಂಗಳ ಜುಲೈ 2ರಂದು ಮುಕ್ತಾಯಗೊಳ್ಳಲಿದೆ. ಅದನ್ನು ಇದೀಗ ಮತ್ತೆ 6 ತಿಂಗಳ ಕಾಲಾವಧಿಗೆ ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ರು.

ಉತ್ತರಪ್ರದೇಶದಲ್ಲಿ ಪತ್ರಕರ್ತರ ಮೇಲೆ ನಡೆದಿರುವ ಹಲ್ಲೆಯ ಮಾಹಿತಿ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿರುವ ಅವರು, ಮುಂಬರುವ ಸಂಸತ್​ ಅಧಿವೇಶನದಲ್ಲಿ ತ್ರಿವಳಿ​ ತಲಾಖ್​ ಮಸೂದೆ​ ಪರಿಚಯಿಸುವುದಾಗಿ ತಿಳಿಸಿದ್ದಾರೆ.

ABOUT THE AUTHOR

...view details