ಕರ್ನಾಟಕ

karnataka

ETV Bharat / briefs

ರೈತ ಸಂಘದ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿ - acciddent

ಚಾಮರಾಜನಗರ ತಾಲೂಕಿನ ಹೊಂಡರಬಾಳು ಸಮೀಪ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ನಾಗೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆಯ ತಪ್ಪಿ ಪಲ್ಟಿ ಹೊಡೆದ ಕಾರ್​ ಚಿತ್ರ

By

Published : May 31, 2019, 5:50 PM IST

ಚಾಮರಾಜನಗರ: ತಾಲೂಕಿನ ಹೊಂಡರಬಾಳು ಬಳಿ ಕಾರು ಅಪಘಾತ ಸಂಭವಿಸಿದೆ. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್​ ನಾಗೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು, ರೈತರ ಸಂಘದ ಅಧ್ಯಕ್ಷ ಪಾರು

ತಾಲೂಕಿನ ಅಮೃತಭೂಮಿಯಲ್ಲಿ ಆಯೋಜಿಸಿದ್ದ ನರೇಂದ್ರ ಮತ್ತು ಕವಿತಾ ಎಂಬುವರ ಸರಳ ವಿವಾಹಕ್ಕೆ ತೆರಳುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಇದೇ ಕಾರಲ್ಲಿ ರಾಜ್ಯ ಉಪಾಧ್ಯಕ್ಷ ಚನ್ನಪಟ್ಟಣ ರಾಮಣ್ಣ, ಲೇಖಕ ಪುನೀತ್ ಅವರು ಕೂಡ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.ಮಳೆ ಬಂದಿದ್ದ ಕಾರಣ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗ್ತಿದೆ.

ABOUT THE AUTHOR

...view details