ಕರ್ನಾಟಕ

karnataka

ETV Bharat / briefs

ಮಾರ್ಗಸೂಚಿ ಅನ್ವಯ ಗಣೇಶ ಚತುರ್ಥಿ ಆಚರಿಸಿ: ಚಿದಾನಂದ ವಟಾರೆ - Shivmogga Ganesha chathurti guildlines news

ಸಾರ್ವಜನಿಕರು ಜಿಲ್ಲಾಡಳಿತದ ಆದೇಶ ಮತ್ತು ಮಾರ್ಗಸೂಚಿಗಳನ್ನು ಪಾಲಿಸಿ ಗಣೇಶ ಚತುರ್ಥಿ ಸರಳವಾಗಿ ಆಚರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ಚಿದಾನಂದ ವಟಾರೆ
ಚಿದಾನಂದ ವಟಾರೆ

By

Published : Aug 20, 2020, 3:17 PM IST

ಶಿವಮೊಗ್ಗ: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ಗಣೇಶ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದಲ್ಲಿ ಅಥವಾ ತಮ್ಮ ಮನೆಯಲ್ಲಿಯೇ ಆಚರಿಸಿ, ರಸ್ತೆ, ಗಲ್ಲಿ, ಓಣಿ, ಮೈದಾನ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಅವಕಾಶವಿಲ್ಲ. ನದಿ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ. ಜೊತೆಗೆ ಗಣೇಶನ ಮೂರ್ತಿ ಮೆರವಣಿಗೆ ಮಾಡುವುದನ್ನು ಸಹ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂದು ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜವಾಬ್ದಾರಿಯುತವಾಗಿ ನಾಗರಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಆಯುಕ್ತರು ತಿಳಿಸಿರುತ್ತಾರೆ.

ಸಮಾಜದಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರ ಅನ್ವಯ ಹಾಗೂ ಭಾರತೀಯ ದಂಡ ಸಂಹಿತೆ ಸೆ. 188ರ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ABOUT THE AUTHOR

...view details