ಕರ್ನಾಟಕ

karnataka

ETV Bharat / briefs

ಕೊರೊನಾ ಸ್ಥಿತಿಗತಿ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಮುಖ್ಯ ಕಾರ್ಯದರ್ಶಿ ಸಭೆ - Dharwad Corona news

ಧಾರವಾಡದ ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳವಾಗುತ್ತಿದ್ದು, ಅಲ್ಲಿ ಕೈಗೊಂಡ ಕ್ರಮಗಳ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆಹಾಕಿದರು.

Dharwad
Dharwad

By

Published : May 20, 2021, 12:32 PM IST

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸ್ಥಿತಿಗತಿ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಧಾರವಾಡ ಪ್ರವಾಸಿಮಂದಿರದ ಹೊರಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕೋವಿಡ್ ಸ್ಥಿತಿಗತಿ ಕುರಿತು ಹಾಗೂ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ಅಲ್ಲಿ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೊರೊನಾ ಮುಕ್ತ ಗ್ರಾಮ ಮಾಡಲು ಗ್ರಾಮೀಣ ಭಾಗದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಗ್ರಾಮ ಪಂಚಾಯತಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ.

ಪ್ರತಿ ತಾಲೂಕಿನಲ್ಲಿ 100 ಬೆಡ್​ಗಳ ಕೇರ್ ಸೆಂಟರ್ ಹಾಗೂ ಆಕ್ಸಿಜನ್, ವೆಂಟಿಲೇಟರ್ ಕುರಿತು ಡಿಸಿ‌ ನಿತೇಶ್​ ಪಾಟೀಲ್​ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಮಾಹಿತಿ ನೀಡಿದರು.

ABOUT THE AUTHOR

...view details