ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆ ಬರದಂತೆ ಕೆಲಸ ನಿರ್ವಹಿಸಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ - Chitradurga district Police progress review meeting
ಪ್ರಾಮಾಣಿಕತೆ, ದಕ್ಷತೆ ಹಾಗೂ ನ್ಯಾಯಸಮ್ಮತೆ ಮಾತ್ರ ನಿಮ್ಮನ್ನು ರಕ್ಷಣೆ ಮಾಡಲು ಸಾಧ್ಯ ಎಂದು ಚಿತ್ರದುರ್ಗದಲ್ಲಿ ನಡೆದ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ: ನಮ್ಮ ಸಿಬ್ಬಂದಿ, ಇಲಾಖೆಗೆ ಕಪ್ಪು ಚುಕ್ಕೆ ಬರದಂತೆ ಕೆಲಸ ಮಾಡಬೇಕು ಹಾಗೂ ಸಾರ್ವಜನಿಕರೊಂದಿಗೆ ಗೌರವದಿಂದ ವರ್ತಿಸಬೇಕು. ಅಪರಾಧಿಗಳನ್ನು ಭಯದಲ್ಲಿಡುವ ನಿಟ್ಟಿನಲ್ಲಿ ನ್ಯಾಯಸಮ್ಮತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೋಲಿಸರಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು ಅವರು, ಮುಂದಿನ ದಿನಗಳಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದು, ಈ ವೇಳೆ ಕರ್ತವ್ಯದಲ್ಲಿ ಲೋಪ ಕಂಡು ಬಂದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಬಾರದು. ಬಡವರು, ಜನಸಾಮಾನ್ಯರು ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಪ್ರಾಮಾಣಿಕತೆ, ದಕ್ಷತೆ ಹಾಗೂ ನ್ಯಾಯಸಮ್ಮತೆ ಮಾತ್ರ ನಿಮ್ಮನ್ನು ರಕ್ಷಣೆ ಮಾಡಲು ಸಾಧ್ಯ ಎಂದು ಹೇಳಿದರು.