ಕರ್ನಾಟಕ

karnataka

ETV Bharat / briefs

ಮಂಗಳೂರು ಧರ್ಮ ಪ್ರಾಂತ್ಯದ ಚರ್ಚ್​ಗಳಲ್ಲಿ ಜೂ. 13ರಿಂದ ಪ್ರಾರ್ಥನೆ ಆರಂಭ - Mangalore latest news

ಮಂಗಳೂರು ಧರ್ಮ ಪ್ರಾಂತ್ಯದ ಚರ್ಚ್​ಗಳಲ್ಲಿ ಜೂ. 13ರಿಂದ ಸರ್ಕಾರದ ನಿಯಮಾವಳಿಗಳಂತೆ ಬಲಿ ಪೂಜೆ, ಪ್ರಾರ್ಥನೆ ನೆರವೇರಿಸಲಾಗುವುದು ಎಂದು ಧರ್ಮಾಧ್ಯಕ್ಷ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Church
Church

By

Published : Jun 6, 2020, 5:21 PM IST

ಮಂಗಳೂರು:ನಗರದ ಧರ್ಮ ಪ್ರಾಂತ್ಯದ ಚರ್ಚ್​ಗಳಲ್ಲಿ ಜೂ. 13ರಿಂದ ಸರ್ಕಾರದ ನಿಯಮಾವಳಿಗಳಂತೆ ಬಲಿ ಪೂಜೆ, ಪ್ರಾರ್ಥನೆ ನೆರವೇರಿಸಲಾಗುವುದು ಎಂದು ಧರ್ಮಾಧ್ಯಕ್ಷ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚರ್ಚ್​ಗಳಲ್ಲಿ ಬಲಿ ಪೂಜೆಗಳನ್ನು ನೆರವೇರಿಸುವ ಕುರಿತಂತೆ ಸರ್ಕಾರ ಈಗಾಗಲೇ ಮಾರ್ಗದರ್ಶನ ನೀಡಿದ್ದು, ಅದರಂತೆ ಪೂರ್ವ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್, ಮಾಸ್ಕ್​​​​ಗಳನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ಚರ್ಚ್ ಧರ್ಮಗುರುಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ. ಈ ಕುರಿತು ಹೆಚ್ಚಿನ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details