ಕೋಲ್ಕತ್ತಾ :ದಕ್ಷಿಣ ಕೋಲ್ಕತ್ತಾದ ಭಬಾನಿಪುರದ ಮತದಾನ ಕೇಂದ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ ಚಲಾಯಿಸಿದ್ದಾರೆ.
ಇಂದು ಮಧ್ಯಾಹ್ನ 3.50 ರ ಸುಮಾರಿಗೆ ಮಿತ್ರ ಇನ್ಸ್ಟಿಟ್ಯೂಷನ್ ಶಾಲೆಯಲ್ಲಿನ ಮತಕೇಂದ್ರದಲ್ಲಿ ತಮ್ಮ ಮತ ಚಲಾಯಿಸಿದರು.
ಮಮತಾ ಭಬಾನಿಪುರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ಈ ಬಾರಿ ಚುನಾವಣೆಯಲ್ಲಿ ಪುರ್ಬಾ ಮದಿನಿಪುರ ಜಿಲ್ಲೆಯ ನಂದಿಗ್ರಾಮದಿಂದ ಬಿಜೆಪಿಯ ಸುವೆಂದು ಅಧಿಕಾರಿ ಮುಂದೆ ಸ್ಪರ್ಧಿಸುತ್ತಿದ್ಧಾರೆ.