ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ಸುರಿದ ಮಳೆಯಿಂದಾಗಿ ಉಂಟಾಗಿರುವ ಅನಾನುಕೂಲ, ಸಮಸ್ಯೆಗಳನ್ನು ಬಗೆ ಹರಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿ.ಬಿ.ಎಂ.ಪಿ, ಬಿ.ಡಿ.ಎ, ಹಾಗೂ ಬೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಮಳೆಯಿಂದಾಗಿ ಬೆಂಗಳೂರಿನ ತಗ್ಗು ಪ್ರದೇಶದಲ್ಲಿ ನೀರು ನಿಂತಿದೆ. ವಿದ್ಯುತ್ ಕಂಬಗಳು ಉರುಳಿವೆ. ಸಾರ್ವಜನಿಕರಿಗೆ ಹಲವು ಪ್ರದೇಶಗಳಲ್ಲಿ ತೊಂದರೆ ಉಂಟಾಗಿದೆ. ಈ ಸಂಬಂಧ ತುರ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಗೋಪಾಲಯ್ಯ, ಬಿಬಿಎಂಪಿ ಮಹಾಪೌರರಾದ ಗಂಗಾಂಭಿಕಾ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿ.ಡಿ.ಎ.ಆಯುಕ್ತ ರಾಕೇಶ್ ಸಿಂಗ್, ಕಾಲೇಜು ಶಿಕ್ಷಣ ಇಲಾಖೆ ಆಯಕ್ತ ಡಾ.ಎನ್.ಮಂಜುಳಾ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ನಾಗಾಂಭಿಕಾ ದೇವಿ ಭಾಗವಹಿಸಿದ್ದರು.
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸಿ.ಶಿಖಾ ಅವರು ಈ ಕುರಿತು ಮುಖ್ಯಮಂತ್ರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡಿದರು. ಬೆಂಗಳೂರು ವಿದ್ಯುತ್ ಕಂಪನಿಯ 295 ಕಂಬಗಳು ಮುರಿದಿದ್ದು. ಅವುಗಳಲ್ಲಿ ಬೆಂಗಳೂರಿನಲ್ಲಿ 80 ಕಂಬಗಳು ನೆಲಕಚ್ಚಿವೆ. ಒಟ್ಟಾರೆ 76 ಲಕ್ಷ ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ತಿಳಿಸಿದರು.