ಬೆಂಗಳೂರು :ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ನೋಂದಾಯಿಸಿಕೊಂಡ ಗೃಹ ಕಾರ್ಮಿಕರು ಮಾತ್ರ ಕೋವಿಡ್ ಆರ್ಥಿಕ ಪರಿಹಾರ ಪ್ಯಾಕೇಜ್ ಪಡೆದುಕೊಳ್ಳಲು ಅರ್ಹರು ಎಂಬ ಬಗ್ಗೆ ವಿವರಣೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಗೃಹ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಅವರಿಗೆ ಅಸಂಘಟಿತ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.