ಸುರೇಂದ್ರನಗರ(ಗುಜರಾತ್):ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಪಾಟಿದಾರ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಮೇಲೆ ವ್ಯಕ್ತಿವೋರ್ವ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಸಾರ್ವಜನಿಕ ಸಭೆಯಲ್ಲಿ ಹಾರ್ದಿಕ್ ಪಟೇಲ್ಗೆ ಕಪಾಳಮೋಕ್ಷ... ವಿಡಿಯೋ ವೈರಲ್ - ಕಪಾಳಮೋಕ್ಷ
ಗುಜರಾತ್ನ ಸುರೇಂದ್ರನಗರದಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಮಾರಂಭದಲ್ಲಿ ಹಾರ್ದಿಕ್ ಪಟೇಲ್ ಮೇಲೆ ವ್ಯಕ್ತಿಯೊಬ್ಬ ಕಪಾಳ ಮೋಕ್ಷ ಮಾಡಿರುವ ಘಟನೆ ನಡೆದಿದೆ.
ಗುಜರಾತ್ನ ಸುರೇಂದ್ರನಗರದಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದ ವೇಳೇ ಈ ಘಟನೆ ನಡೆದಿದೆ. ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಸ್ಟೇಜ್ ಮೇಲೆ ನಿಂತು ಮಾತನಾಡುತ್ತಿದ್ದ ವೇಳೆ ವ್ಯಕ್ತಿವೋರ್ವ ಏಕಾಏಕಿಯಾಗಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾನೆ. ಘಟನೆ ನಡೆಯುತ್ತಿದ್ದಂತೆ ತಕ್ಷಣ ಆತನ ಮೇಲೆ ಸಭೆಯಲ್ಲಿ ಸೇರಿದ್ದ ಕೆಲವರು ಹಲ್ಲೆ ಕೂಡ ಮಾಡಿದ್ದಾರೆ. ಇನ್ನು ಹಲ್ಲೆ ಮಾಡಿರುವ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎಂಬ ಮಾತು ಕೂಡ ಕೇಳಿ ಬಂದಿದೆ.
ಇದಾದ ಬಳಿಕ ಪೊಲೀಸರು ಆತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಹಾರ್ದಿಕ್ ಪಟೇಲ್ ಮೇಲೆ ಯಾವ ಕಾರಣಕ್ಕಾಗಿ ಹಲ್ಲೆ ನಡೆಸಿದ್ದಾನೆಂದು ತಿಳಿದು ಬಂದಿಲ್ಲ.