ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ನೀರಸ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಗಾದಿ ತೊರೆಯುವ ಮನಸ್ಸು ಮಾಡಿರುವ ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ರಾಜೀವ್ ಗಾಂಧಿ ಕಾಲದಿಂದಲೂ ಗಾಂಧಿ ಕುಟುಂಬ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಾ ಬಂದಿದೆ. ತಾವು ಅಧ್ಯಕ್ಷ ಹುದ್ದೆಯನ್ನು ತೊರೆಯಬಾರದು ಎಂದು ರಕ್ತದಲ್ಲಿ ಪತ್ರ ಬರೆದು ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಶೈಲೇಂದ್ರ ತಿವಾರಿ ಮನವಿ ಮಾಡಿಕೊಂಡಿದ್ದಾರೆ.