ಕರ್ನಾಟಕ

karnataka

ETV Bharat / briefs

ಕೋವಿಡ್​​ಗೆ ಒಂದೇ ಗ್ರಾಮದ ಇಬ್ಬರು ಬಲಿ: ಆತಂಕದಲ್ಲಿ ಗ್ರಾಮಸ್ಥರು - dharwad news

ಕಳೆದ ವಾರ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶಿಕ್ಷಕರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

covid
covid

By

Published : May 11, 2021, 4:18 PM IST

Updated : May 11, 2021, 4:26 PM IST

ಧಾರವಾಡ: ಕೊರೊನಾ ವೈರಸ್ ಮಹಾಮಾರಿಗೆ ಆದರ್ಶ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ.

ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಪಿ.ಬಿ.ಕಾಳೆನ್ನವರ ಮೃತ ಶಿಕ್ಷಕ. ಕಳೆದ ವಾರ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಅವರ ಸೇವೆ ಗುರುತಿಸಿ ಅನೇಕ ಪ್ರಶಸ್ತಿ ಪುರಸ್ಕಾರಗಳು ಸಂದಿವೆ. ಜತೆಗೆ ಆದರ್ಶ ಶಿಕ್ಷಕರು ಎಂಬ ಹೆಸರು ಗಳಿಸಿದ್ದರು. ಅವರ ನಿಧನದಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಗ್ರಾಮಸ್ಥರು ಕಂಬನಿ‌ ಮಿಡಿದಿದ್ದಾರೆ‌.

ಇದರ ಬೆನ್ನಲ್ಲೇ ಅದೇ ಗ್ರಾಮದ ಮತ್ತೋರ್ವ ಮಹಿಳೆ ಡೆಡ್ಲಿ ಸೋಂಕಿಗೆ ಬಲಿಯಾಗಿದ್ದು, ಗ್ರಾಮದಲ್ಲಿ ಆತಂಕ ಹೆಚ್ಚಾಗಿದೆ. ಮಹಿಳೆಯನ್ನ ಸಿದ್ದವ್ವ ಎಂದು ಗುರುತಿಸಲಾಗಿದೆ. ಇಬ್ಬರ ಮೃತದೇಹವನ್ನು ಕೋವಿಡ್ ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ.

Last Updated : May 11, 2021, 4:26 PM IST

For All Latest Updates

ABOUT THE AUTHOR

...view details