ಕರ್ನಾಟಕ

karnataka

ETV Bharat / briefs

ಚಿಕ್ಕಮಗಳೂರಿನಲ್ಲಿ ಕೋವಿಡ್​ ಸಂಬಂಧ ಸಿ.ಟಿ ರವಿ ಸಭೆ - CT Ravi held a meeting

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕಡೂರು ತಾಲೂಕಿನ ಸಖರಾಯನಪಟ್ಟಣ ಹಾಗೂ ಹುಲಿಕೆರೆ ವ್ಯಾಪ್ತಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಭೆ ನಡೆಸಿದ್ದಾರೆ.

Chikkamagaluru
Chikkamagaluru

By

Published : May 20, 2021, 7:42 AM IST

ಚಿಕ್ಕಮಗಳೂರು:ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಜಿಲ್ಲೆಯಲ್ಲಿ ಅಧಿಕಾರಿಗಳೊಂದಿಗೆ ಕೊರೊನಾ ಸಂಬಂಧಿಸಿದಂತೆ ಸರಣಿ ಸಭೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕಡೂರು ತಾಲೂಕಿನ ಸಖರಾಯನಪಟ್ಟಣ ಹಾಗೂ ಹುಲಿಕೆರೆ ವ್ಯಾಪ್ತಿಯಲ್ಲಿ ಕೋವಿಡ್ ಕಾರ್ಯಪಡೆಯ ಸಭೆಯನ್ನು ಅಧಿಕಾರಿಗಳೊಂದಿಗೆ ನಡೆಸಿದ್ದು, ಅಲ್ಲಿನ ಪರಿಸ್ಥಿತಿಯ ಕುರಿತಾಗಿ ಚರ್ಚೆ ನಡೆಸಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡರು.

ಕೋವಿಡ್ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಕೋವಿಡ್ ಲಸಿಕೆಯ ಮಹತ್ವದ ಬಗ್ಗೆ ಕಾರ್ಯಪಡೆಗೆ ಸಿ.ಟಿ ರವಿ ಮಾಹಿತಿ ನೀಡಿದ್ದು, ಈ ಮಾಹಿತಿಯನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ತಿಳಿಸಿದರು. ಹಾಗೂ ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಎಚ್ಚರಿಕೆಯನ್ನು ಸಹ ನೀಡಿದ್ದು ಕೊ‘ರೊನಾ ರೋಗಿಗಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸಿಬ್ಬಂದಿಗಳಿಗೆ ಮನವಿ ಮಾಡಿದರು.

ABOUT THE AUTHOR

...view details