ಕರ್ನಾಟಕ

karnataka

ETV Bharat / briefs

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ... ಏ. 30ರ ನಂತರ ರಾಜ್ಯ ಸೇರಿ ಹಲವಡೆ ಭಾರಿ ಮಳೆ! - ನವದೆಹಲಿ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿರುವ ಕಾರಣ, ರಾಜ್ಯ ಸೇರಿದಂತೆ ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ವಾಯುಬಾರ ಕುಸಿತ

By

Published : Apr 26, 2019, 8:59 PM IST

ನವದೆಹಲಿ: ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಚಂಡುಮಾರುತ ಉಂಟಾಗಲಿದ್ದು, ಏಪ್ರಿಲ್​​ 30ರ ನಂತರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿರುವ ಕಾರಣ, ಅದು ನೇರವಾಗಿ ತಮಿಳುನಾಡು,ಕೇರಳ, ಪುದುಚೇರಿ ಸೇರಿದಂತೆ ರಾಜ್ಯದ ಕರಾವಳಿ ಪ್ರದೇಶಗಳಿಗೂ ಲಗ್ಗೆಯಿಡಲಿದೆ ಪರಿಣಾಮ ಭಾರಿ ಪ್ರಮಾಣದ ಮಳೆ ಸುರಿಯಲಿದೆ ಎಂದು ತಿಳಿದು ಬಂದಿದೆ. ಅದಕ್ಕಾಗಿ ಸಮುದ್ರ ತೀರಕ್ಕೆ ತೆರಳುವ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಪ್ರಮುಖವಾಗಿ ಸಕಲೇಶಪುರ, ಚಿಕ್ಕಮಗಳೂರು, ಮಂಗಳೂರು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದರ ಜತೆಗೆ ಬೆಂಗಳೂರು, ಮೈಸೂರು ಹಾಗೂ ಮಲೆನಾಡು ಪ್ರದೇಶಗಳಲ್ಲೂ ವರುಣ ತನ್ನ ಆರ್ಭಟ ತೋರಿಸಲಿದ್ದಾನೆ ಎಂದು ತಿಳಿದು ಬಂದಿದೆ.

ಕೇರಳದ ಇಡುಕ್ಕಿ, ಎರ್ನಾಕುಲಂ,ತ್ರಿಸ್ಸೂರ್ ಹಾಗೂ ಮಲಾಪುರಂನಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಸ್ಥಳಗಳಲ್ಲಿ ಮುಂದಿನ 72 ಗಂಟೆಗಳಲ್ಲಿ ವರುಣನ ಅಬ್ಬರ ಜೋರಾಗಲಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details