ಕರ್ನಾಟಕ

karnataka

ETV Bharat / briefs

ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ, ಲಾರಿ ವಶಕ್ಕೆ ಪಡೆದ ಪೊಲೀಸರು.. - Police seized lorry

ಈ ಸಂಬಂಧ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Davanagere
Davanagere

By

Published : Jun 5, 2020, 3:41 PM IST

ದಾವಣಗೆರೆ :ಲಾರಿಯಲ್ಲಿಅಕ್ರಮವಾಗಿ ಸಾಗಿಸುತ್ತಿದ್ದ 8 ಟನ್ ಅಕ್ಕಿಯನ್ನಪೊಲೀಸರು ಹುಣಸೆಕಟ್ಟೆ ಕೋಳಿ ಫಾರಂ ಬಳಿ ವಶಪಡಿಸಿಕೊಂಡಿದ್ದಾರೆ.


ಅಕ್ರಮ ಪಡಿತರ ಅಕ್ಕಿ ಸಾಗಾಟ‌ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಪಡೆದ ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ನರಸಿಂಹ ವಿ ತಾಮ್ರಧ್ವಜ ಅವರು ಆಹಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಕಿ ಯಾರಿಗೆ ಸೇರಿದ್ದು, ಎಲ್ಲಿಂದ ಎಲ್ಲಿಗೆ ಸಾಗಾಟ ಮಾಡಲಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ABOUT THE AUTHOR

...view details