ಬಳ್ಳಾರಿ: ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಏಕಚಕ್ರಾಧಿಪತ್ಯ ಹಾಗೂ ಹಾಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ ಅವರ ನೇಮಕಾತಿಗೆ ಬೇಸತ್ತು ತಾಲೂಕು, ಜಿಲ್ಲಾ ಮತ್ತು ರಾಜ್ಯ ಘಟಕದ 40ಕ್ಕೂ ಹೆಚ್ಚು ಪದಾಧಿಕಾರಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದರು.
ಸಾಮೂಹಿಕ ರಾಜೀನಾಮೆ ನೀಡಿದ ಪದಾಧಿಕಾರಿಗಳು ಜಿಲ್ಲೆಯ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ, ಸಂಡೂರು ಮತ್ತು ಸಿರುಗುಪ್ಪ ತಾಲೂಕು ಸೇರಿದಂತೆ ಬೂತ್ ಹಾಗೂ ಗ್ರಾಮಾಂತರ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಮಹಿಳಾ ಮೋರ್ಚಾ ಘಟಕದ ಪದಾಧಿಕಾರಿ ಕೆ.ಸುಗುಣ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ.
ಮುಂದುವರಿಯಲಿದೆ ರಾಜೀನಾಮೆ ಪರ್ವ:
ಇದೇ ವೇಳೆ ಜಿಲ್ಲಾದ್ಯಂತ ರಾಜೀನಾಮೆ ಪರ್ವ ಇನ್ನೂ ಮುಂದುವರಿಯಲಿದೆ ಎಂದು ಚನ್ನಬಸವನಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.