ಕರ್ನಾಟಕ

karnataka

ಬಿಬಿಎಂಪಿ ಚುನಾವಣೆ ವಿಳಂಬ : ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

By

Published : Sep 12, 2020, 4:13 PM IST

ಬಿಬಿಎಂಪಿ ಮಾಜಿ ಸದಸ್ಯ ಎಂ. ಶಿವರಾಜ್ ಮತ್ತಿತರರು ಈ ಪಿಐಎಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಲಿದ್ದಾರೆ..

High court
High court

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಬಿಬಿಎಂಪಿ ಮಾಜಿ ಸದಸ್ಯ ಎಂ. ಶಿವರಾಜ್ ಮತ್ತಿತರರು ಈ ಪಿಐಎಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಲಿದ್ದಾರೆ.

ಸೆಪ್ಟೆಂಬರ್ 10ಕ್ಕೆ ಚುನಾಯಿತ ಸದಸ್ಯರ ಅವಧಿ ಮುಗಿದಿದ್ದು, ಇದಕ್ಕೂ ಮುನ್ನಾ ಚುನಾವಣೆ ನಡೆಸಿ ಹೊಸ ಸದಸ್ಯರ ಆಯ್ಕೆ ಮಾಡಬೇಕಿತ್ತು. ಆದರೆ, ಸರ್ಕಾರ ಚುನಾವಣೆ ಮುಂದೂಡುವ ಉದ್ದೇಶದಿಂದ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಮಾಡಿದೆ ಎಂದು ಆರೋಪಿಸಿರುವ ಅರ್ಜಿದಾರರು, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿಬೇಕು ಎಂದು ಅರ್ಜಿಯಲ್ಲಿ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ABOUT THE AUTHOR

...view details