ಕರ್ನಾಟಕ

karnataka

ETV Bharat / briefs

ಹಕ್ಕು ಚ್ಯುತಿ ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಆಯನೂರು ಮಂಜುನಾಥ್​​

ವಿಧಾನ ಪರಿಷತ್ ಸದಸ್ಯರ ಹಕ್ಕುಗಳಿಗೆ ಚ್ಯುತಿ ಉಂಟಾದ ಪ್ರಕರಣಗಳಲ್ಲಿ ತಪ್ಪು ಮಾಡಿದವರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಧಾನ ಪರಿಷತ್ ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷ ಆಯನೂರು ಮಂಜುನಾಥ್​ ಹೇಳಿದರು.

By

Published : Jun 21, 2019, 9:02 AM IST

ಆಯನೂರು ಮಂಜುನಾಥ್​

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯರ ಹಕ್ಕುಗಳಿಗೆ ಚ್ಯುತಿ ಉಂಟಾದ ಪ್ರಕರಣಗಳಲ್ಲಿ ತಪ್ಪು ಮಾಡಿದವರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಧಾನ ಪರಿಷತ್ ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷ ಆಯನೂರು ಮಂಜುನಾಥ್​ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್​, ವಿಧಾನ ಪರಿಷತ್ ಸದಸ್ಯರಿಗೆ ಅಧಿಕಾರಿಗಳು ಸರಿಯಾದ ಸ್ಥಾನಮಾನ ನೀಡದಿರುವ ಬಗ್ಗೆ ಹಲವು ದೂರುಗಳು ಸಮಿತಿಗೆ ಬರುತ್ತಿವೆ. ಜಿಲ್ಲೆಯಲ್ಲಿ ಪ್ರಸ್ತುತ 13 ದೂರುಗಳಿವೆ. ಈ ಕುರಿತು ಅಧಿಕಾರಿಗಳಿಗೆ ನಿಯಮಾವಳಿಗಳ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು ಹೇಳಿದರು.

ವಿಧಾನಸಭೆ ಸದಸ್ಯರು ಹಾಗೂ ಲೋಕಸಭಾ ಸದಸ್ಯರಿಗೆ ನೀಡುವಷ್ಟೇ ಸ್ಥಾನಮಾನವನ್ನು ವಿಧಾನ ಪರಿಷತ್ ಸದಸ್ಯರಿಗೂ ನೀಡಬೇಕು. ಸಭೆ, ಸಮಾರಂಭಗಳ ಶಿಷ್ಟಾಚಾರ ಮಾತ್ರವಲ್ಲದೆ, ಆಡಳಿತಾತ್ಮಕ ವಿಷಯಗಳ ಮಾಹಿತಿಯನ್ನು ಸಹ ವಿಧಾನ ಪರಿಷತ್ ಸದಸ್ಯರಿಗೆ ನೀಡಬೇಕಾಗಿದೆ. ಜಿಲ್ಲೆಯಲ್ಲಿ ಮುಖ್ಯವಾಗಿ ಸಣ್ಣ ನೀರಾವರಿ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ, ಪಂಚಾಯತ್ ರಾಜ್, ಮೆಸ್ಕಾಂ, ಶಿಕ್ಷಣ ಇಲಾಖೆಯ ಹಕ್ಕು ಚ್ಯುತಿ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಕುರಿತಾಗಿ ಶಿಸ್ತು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಪ್ರತಿ 3 ತಿಂಗಳಿಗೊಮ್ಮೆ ಹಕ್ಕು ಚ್ಯುತಿ ಪ್ರಕರಣಗಳ ಬಗ್ಗೆ ಪರಿಶೀಲನಾ ಸಭೆ ನಡೆಸಬೇಕು. ಅಧಿಕಾರಿಗಳಿಗೆ ಈ ಕುರಿತು ಕಾರ್ಯಾಗಾರ ಆಯೋಜಿಸಬೇಕು ಎಂದರು.

For All Latest Updates

TAGGED:

ABOUT THE AUTHOR

...view details