ಪೂರ್ಣಿಯಾ (ಬಿಹಾರ):ಕೋವಿಡ್ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ಪ್ಲಾಸ್ಟಿಕ್‌ನಿಂದ ಸುತ್ತಿ ಜೆಸಿಬಿ ಮೂಲಕ ಸಾಗಿಸಿದ ಘಟನೆ ನಡೆದಿದೆ.
ಈ ವೇಳೆ ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ. ಈ ಘಟನೆ ಜಿಲ್ಲಾಡಳಿತದ ಮೇಲೆ ತೀವ್ರ ಟೀಕೆಗೆ ಕಾರಣವಾಗಿದೆ. ಬೆಲ್ಗಾಚಿ ಗ್ರಾಮದ ನಿವಾಸಿ ಪಂಚು ಯಾದವ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.