ಬಾರಾಬಂಕಿ(ಯುಪಿ):ವಿಷಯುಕ್ತ ಮದ್ಯ ಸೇವನೆ ಮಾಡಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ 12 ಮಂದಿ ಸಾವನ್ನಪ್ಪಿರುವ ಘಟನೆರಾಣಿಗಂಜ್ ಪ್ರದೇಶದಲ್ಲಿ ನಡೆದಿದೆ.
ಮದ್ಯ ಸೇವನೆ ಮಾಡುತ್ತಿದ್ದಂತೆ ಅನೇಕರು ಅಸ್ವಸ್ಥಗೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ. ಆಸ್ಪತ್ರೆಗೆ ದಾಖಲಾಗಿರುವ 10ಕ್ಕೂ ಹೆಚ್ಚಿನವರ ಸ್ಥಿತಿ ಈಗಲೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.