ಕರ್ನಾಟಕ

karnataka

ETV Bharat / briefs

ಬರ ನಿರ್ವಹಣೆಗೆ 730 ಕೋಟಿ ಬಿಡುಗಡೆ: ಸಚಿವ ದೇಶಪಾಂಡೆ

ಬರ ಪರಿಶೀಲನೆಗೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್​.ವಿ.ದೇಶಪಾಂಡೆ. ಉದ್ಯೋಗ ಅರಸಿ ಗುಳೆ ಹೋಗದಂತೆ ರೈತರು, ಕಾರ್ಮಿಕರಲ್ಲಿ ಮನವಿ ಮಾಡಿದ ಸಚಿವ.

ಬರ ಪರಿಹಾರ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಆರ್​.ವಿ.ದೇಶಪಾಂಡೆ

By

Published : May 29, 2019, 12:12 AM IST

ಹುಬ್ಬಳ್ಳಿ: ಕುಡಿಯುವ ನೀರು, ಮೇವು ಪೂರೈಸಲು ಸುಮಾರು 730 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ 13 ಕೋಟಿ ಮಾನವ ದಿನಗಳ ಗುರಿಯನ್ನು ರಾಜ್ಯಕ್ಕೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್​.ವಿ.ದೇಶಪಾಂಡೆ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮಕ್ಕೆ ಬರ ಪರಿಶೀಲನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಮುಂಗಾರು ದುರ್ಬಲವಾಗಿದೆ. ಬರ ಪರಿಸ್ಥಿತಿ ಮುಂದುವರೆಯುವ ಆತಂಕವಿದೆ.

ಬರ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್​.ವಿ.ದೇಶಪಾಂಡೆ

ಕುಡಿಯುವ ನೀರು ಪೂರೈಸಲು ಟ್ಯಾಂಕರ್​ಗಳನ್ನು ಬಳಸುವ ಅಧಿಕಾರ ತಹಶೀಲ್ದಾರರಿಗೆ ನೀಡಲಾಗಿದೆ. ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿ ಇದ್ದಿದ್ದರಿಂದ ಬರಪೀಡಿತ ಸ್ಥಳಗಳಿಗೆ ಅಧಿಕೃತವಾಗಿ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ ಎಂದರು.

ಬೆಂಗಳೂರು ಮತ್ತು ಹುಬ್ಬಳ್ಳಿಯಿಂದ ಮೋಡ ಬಿತ್ತನೆ ಕಾರ್ಯ ನಡೆಸಲು ಸರ್ಕಾರ ನಿರ್ಧರಿಸಿದೆ. ಮುಖ್ಯವಾಗಿ ಯಾರೂ ಗುಳೆ ಹೋಗಬಾರದು ಎಂಬ ಉದ್ದೇಶದಿಂದ ನರೇಗಾ ಅಡಿ ಉದ್ಯೋಗ ಸೃಜನೆ ಕಾಮಗಾರಿಗಳನ್ನು ಅಧಿಕ ಪ್ರಮಾಣದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಪ್ರತಿ ಜಿಲ್ಲೆಗೂ ಗುರಿ ನಿಗದಿಪಡಿಸಿ ಉದ್ಯೋಗ ಖಾತ್ರಿ ಕೆಲಸಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕನಿಷ್ಠ ಒಂದು ಕಾಮಗಾರಿಯನ್ನಾದರೂ ಕೈಗೊಳ್ಳಲು ಸೂಚಿಸಲಾಗಿದೆ ಎಂದರು‌.

ಜುಲೈ ಅಂತ್ಯದವರೆಗೂ ಮೇವನ್ನು ರಾಜ್ಯದಿಂದ ಹೊರಗೆ ಕಳಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯಬೇಕು. ಅರಣ್ಯ ಬೆಳೆಸಿ ನಿಸರ್ಗ ಕಾಪಾಡಬೇಕು ಎಂದು ಹೇಳಿದರು.

ABOUT THE AUTHOR

...view details