ನವದೆಹಲಿ:ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭಗೊಂಡಿದೆ. ಇದರ ಮಧ್ಯೆ ಚುನಾವಣೋತ್ತರ ಸಮೀಕ್ಷೆಗಳು ಕೂಡ ಬಹಿರಂಗಗೊಂಡಿದ್ದು, ಸಮೀಕ್ಷೆಯಲ್ಲಿ ಎನ್ಡಿಎಗೆ ಸ್ಪಷ್ಟ ಬಹುಮತ ನೀಡಿವೆ.
ಇವಿಎಂ ತಿರುಚಲು ಸಾಧ್ಯವೇ ಇಲ್ಲ,ಮಾಜಿ ಚುನಾವಣಾ ಮುಖ್ಯಸ್ಥ ಓಂ ಪ್ರಕಾಶ್ ರಾವತ್ - ಓಂ ಪ್ರಕಾಶ್ ರಾವತ್
ಯಾವುದೇ ಕಾರಣಕ್ಕೂ ಇವಿಎಂ ತಿರುಚಲು ಸಾಧ್ಯವಿಲ್ಲ ಎಂದು ಕೇಂದ್ರದ ಮಾಜಿ ಚುನಾವಣಾ ಮುಖ್ಯಸ್ಥ ಓಂ ಪ್ರಕಾಶ್ ರಾವತ್ ಸ್ಪಷ್ಟನೆ ನೀಡಿದ್ದಾರೆ.
ಇದೇ ವಿಷಯವನ್ನಿಟ್ಟುಕೊಂಡು ವಿಪಕ್ಷಗಳು ಇವಿಎಂ ಮೇಲೆ ಗಂಭೀರ ಆರೋಪ ಮಾಡಲು ಶುರು ಮಾಡಿದ್ದು, ಅವುಗಳನ್ನು ತಿರುಚಲಾಗಿದೆ ಎಂದು ಆರೋಪಿಸಿವೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ 22 ವಿಪಕ್ಷಗಳು, ಇವಿಎಂ ಜತೆ ವಿವಿಪ್ಯಾಟ್ಗಳ ಮತಎಣಿಕೆ ಮಾಡಬೇಕು ಎಂದು ಆಗ್ರಹಿಸಿದ್ದವು. ಆದರೆ ಇದನ್ನ ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.
ಇದೀಗ ಇದೇ ವಿಷಯವಾಗಿ ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯಸ್ಥ ಓಂ ಪ್ರಕಾಶ್ ರಾವತ್ ಮಾತನಾಡಿದ್ದು, ಯಾವುದೇ ಕಾರಣಕ್ಕೂ ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ತಿರುಚಲು ಸಾಧ್ಯವಿಲ್ಲ ಎಂದಿದ್ದಾರೆ. ಬಹಳಷ್ಟು ಸೆಕ್ಯುರಿಟಿ ಅಂಶಗಳನ್ನ ಇವಿಎಂ ಹೊಂದಿದ್ದು, ಮತಎಣಿಕೆ ವೇಳೆ ಎಲ್ಲ ಪಕ್ಷಗಳ ಎದುರಲ್ಲೇ ಅವುಗಳನ್ನ ಓಪನ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಮತದಾನಕ್ಕಾಗಿ ಇವಿಎಂ ತೆಗೆದುಕೊಂಡು ಹೋಗುವಾಗಲು ಇವುಗಳನ್ನ ಪರೀಕ್ಷೆಗೊಳಪಡಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.