ಹುಬ್ಬಳ್ಳಿ: ರಾಜಕೀಯ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಮಾಜಿ ಸಚಿವ ಸಂತೋಷ ಲಾಡ್ ಫುಡ್ ಕಿಟ್ ವಿತರಣೆಯ ನೆಪದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡು ನಿಯಮ ಉಲ್ಲಂಘನೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.
ಫುಡ್ ಕಿಟ್ ನೆಪದಲ್ಲಿ ಮಕ್ಕಳ ಬಳಕೆ: ಪ್ರಚಾರದ ಬರದಲ್ಲಿ ನಿಯಮ ಉಲ್ಲಂಘಿಸಿದ ಲಾಡ್ - Hubli Santhosh Laad News
ಫುಡ್ ಕಿಟ್ ಹಂಚುವ ನೆಪದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದು, ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಮಾಸ್ಕ್ ಧರಿಸದೇ ಸಾವಿರಾರು ಜನರನ್ನು ಸೇರಿಸಿದ್ದಾರೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಫುಡ್ ಕಿಟ್ ಹಂಚುವ ನೆಪದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದು, ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಮಾಸ್ಕ್ ಧರಿಸದೇ ಸಾವಿರಾರು ಜನರನ್ನು ಸೇರಿಸಿದ್ದಾರೆ.
ಇನ್ನೂ ದೈಹಿಕ ಅಂತರಕ್ಕಂತೂ ಕಿಮ್ಮತ್ತು ಇಲ್ಲದೇ ಸ್ವತಃ ಮಾಸ್ಕ್ ಧರಿಸದ ಸಂತೋಷ ಲಾಡ್ ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಿಟ್ ವಿತರಣೆ ಮಾಡಿದ್ದಾರೆ. ಮಕ್ಕಳು ಸೇರಿದಂತೆ ಸಾವಿರಾರು ಜನ ಸಾರ್ವಜನಿಕರನ್ನು ಸೇರಿಸಿ ಪ್ರಚಾರ ನಡೆಸಿದ್ದಾರೆ. ಅಲ್ಲದೇ ಈಗನಿಂದಲೇ ಚುನಾವಣೆ ಪ್ರಚಾರ ಆರಂಭಿಸಿರುವ ಲಾಡ್ ಕಳೆದ ಮೂರು ನಾಲ್ಕು ದಿನಗಳಿಂದ ಕಲಘಟಗಿ ಕ್ಷೇತ್ರದಲ್ಲಿಯೇ ಬೀಡು ಬಿಟ್ಟಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.