ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದುವಾರ ಲಾಕ್ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕೊರೊನಾ ಸೋಂಕು, ಬೆಂಗಳೂರಿನಲ್ಲಿ ಸ್ವಲ್ಪ ತಗ್ಗಿದ್ದರೂ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಲ್ಲ. ಆದ್ದರಿಂದ ಸರ್ಕಾರ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿನ ಮೊದಲ ಅಲೆಯ ಕಳೆದ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರದ ಆದಾಯ ತೆರಿಗೆ ಕುಗ್ಗಿತ್ತು. ಆದರೆ, ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರಕ್ಕೆ ತೆರಿಗೆ ಹೆಚ್ಚು ಬಂದಿದೆ. ಅಬಕಾರಿ ಇಲಾಖೆಯೊಂದರಲ್ಲೇ ಶೇ.150ರಷ್ಟು ಕಳೆದ ವರ್ಷಕ್ಕಿಂತ ಹೆಚ್ಚಿನ ಆದಾಯ ಬಂದಿದೆ. ಸರ್ಕಾರ ಈ ಬಾರಿ ಘೋಷಿಸಿರುವ 1,250 ಕೋಟಿ ರೂಪಾಯಿಗಳ ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದು ಹೆಚ್ ಡಿ ಕೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.