ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತು ರೈತನೊಬ್ಬ ಸಾವಿಗೆ ಶರಣಾದ ಘಟನೆ ನಡೆದಿದೆ.
Farmer got suicide in vijayapura kotakanuru
ವಿಜಯಪುರ: ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದಿದೆ.
ಬಸಪ್ಪ ಕಲ್ಲಪ್ಪ ಹಡಪದ (65) ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನಿಗಾಗಿ ಖಾಸಗಿಯವರ ಕಡೆಯಿಂದ ಸಾಲ ಪಡೆದಿದ್ದನಂತೆ. ಅದನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮೃತನಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.