ರಾಯಚೂರು ಜಿಲ್ಲೆಯಲ್ಲಿಂದು 15 ಜನರಿಗೆ ಕೊರೊನಾ - Corona updates
ರಾಯಚೂರು ಜಿಲ್ಲೆಯಲ್ಲಿ ಇಂದು 15 ಜನ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣವಾಗುತ್ತಿದೆ.

ರಾಯಚೂರು: ಜಿಲ್ಲೆಯಲ್ಲಿ ಇಂದು 15 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 488ಕ್ಕೆ ಏರಿಕೆಯಾಗಿದೆ.
ರಾಯಚೂರು ತಾಲೂಕಿನಲ್ಲಿ 9 ಜನ, ಮಾನ್ವಿ ತಾಲೂಕು ಮತ್ತು ಲಿಂಗಸುಗೂರು ತಾಲೂಕಿನಲ್ಲಿ ತಲಾ ಒಂದು ಸೋಂಕು ಪತ್ತೆಯಾಗಿದೆ. 518 ಜನರ ವರದಿ ನೆಗೆಟಿವ್ ಬಂದಿದ್ದು, ಪ್ರಯೋಗಾಲಯದಿಂದ ಇನ್ನೂ 1,302 ಜನರ ವರದಿ ಬರುವುದು ಬಾಕಿ ಇದೆ.
ಜಿಲ್ಲೆಯಲ್ಲಿ 83 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಒಪೆಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ 58 ಮತ್ತು ಕ್ವಾರಂಟೈನ್‌ನಲ್ಲಿ 25 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಗುಣಮುಖರಾದ 400 ಜನ ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.