ಕರ್ನಾಟಕ

karnataka

ETV Bharat / briefs

ಚರ್ಮ ಕುಶಲಕರ್ಮಿಗಳಿಗೆ ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ: ಸಿಎಂಗೆ ಅಭಿನಂದನೆ ಸಲ್ಲಿಸಿದ ಶ್ರೀರಾಮುಲು - Minister of Social Welfare B Sriramulu

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ (ಲಿಡ್ಕರ್ ) ಅಗತ್ಯ ಕ್ರಮವಹಿಸಲಾಗುತ್ತಿದ್ದು, ಫಲಾನುಭವಿಗಳು ದಿನಾಂಕ 3-6-2021 ರಿಂದ 15/6/2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

  Financial Aid for Skin Craftsman
Financial Aid for Skin Craftsman

By

Published : Jun 3, 2021, 5:18 PM IST

ಬೆಂಗಳೂರು: 50,000 ಚರ್ಮ ಕುಶಲಕರ್ಮಿಗಳಿಗೆ ತಲಾ ಎರಡು ಸಾವಿರ ರೂ ಆರ್ಥಿಕ ನೆರವು ನೀಡಲು 10 ಕೋಟಿ ರೂ ಬಿಡುಗಡೆ ಮಾಡಿದ್ದು, ಪರಿಹಾರಧನ ನೀಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಸಲ್ಲಿಸಿದ್ದ ಪ್ರಸ್ತಾವನೆಗೆ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿ, ಅನುಮೋದನೆ ನೀಡಿ ನೆರವಾಗಲು ಅನುದಾನವನ್ನೂ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಿಗೆ ಸಮುದಾಯದ ಪರವಾಗಿ ಅಭಿನಂದಿಸುವುದಾಗಿ ಹೇಳಿದ್ದಾರೆ.

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ (ಲಿಡ್ಕರ್ ) ಅಗತ್ಯ ಕ್ರಮವಹಿಸಲಾಗುತ್ತಿದ್ದು, ಫಲಾನುಭವಿಗಳು ದಿನಾಂಕ 3-6-2021 ರಿಂದ 15/6/2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಫಲಾನುಭವಿಗಳು ಪರಿಹಾರ ಧನವನ್ನು ಪಡೆಯಲು ಅರ್ಜಿಗಳನ್ನು ತಮ್ಮ ಮೊಬೈಲ್ ನಿಂದ/ ಬೆಂಗಳೂರು ಒನ್/ ಕರ್ನಾಟಕ ಒನ್ /ಗ್ರಾಮ ಒನ್/ಸಿಟಿಜನ್ ಸರ್ವೀಸ್ ಸೆಂಟರ್ ಕೇಂದ್ರಗಳ ಮೂಲಕ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಪರಿಹಾರ ಧನವನ್ನು ಸದ್ಬಳಕೆ ಮಾಡಿಕೊಂಡು ಜೀವನ ನಿರ್ವಹಣೆ ಮಾಡಲು ಮನವಿ ಮಾಡಿದ ಸಚಿವರು, ಇನ್ನು ಮುಂದೆಯೂ ತಮ್ಮ ಉದ್ಯೋಗ ಮುಂದುವರೆಸಲು ಮತ್ತು ಆರ್ಥಿಕವಾಗಿ ಸಧೃಡರಾಗಲು ಅವಶ್ಯಕವಿರುವ ಯೋಜನೆಗಳನ್ನು /ಕಾರ್ಯಕ್ರಮಗಳನ್ನು ಸರ್ಕಾರವು ನೀಡಲಿದೆ. ತಮ್ಮ ಸಂಕಷ್ಟಗಳಿಗೆ ಸ್ಪಂದಿಸಿ ಸದಾ ನಿಮ್ಮೊಂದಿಗೆ ನಮ್ಮ ಸರ್ಕಾರ ಇರಲಿದೆ. ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಸಮಾಜಕ್ಕೆ ಅಭಯ ನೀಡಿದ್ದಾರೆ.

For All Latest Updates

ABOUT THE AUTHOR

...view details