ಹೊಸಪೇಟೆ:ಕೊರೊನಾ ನಿಯಮ ಮೀರಿ ಪ್ರತಿಭಟನೆ ನಡೆಸಿದ್ದ 11 ಜನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಇಂದು ನಗರದ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರೊನಾ ಕರ್ಫ್ಯೂ ಉಲ್ಲಂಘನೆ: 11 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು - 11 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಿಯಮ ಮೀರಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗಿದೆ.
hospet
ಮೇ 5 ರಂದು ಬಿಜೆಪಿ ಕಾರ್ಯಕರ್ತರು ನಗರದ ರೋಟರಿ ವೃತ್ತದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದರು. ಕೊರೊನಾ ಕರ್ಫ್ಯೂ ಇದ್ದು, 144 ಸೆಕ್ಷನ್ ಜಾರಿಯಲ್ಲಿದೆ. ಹಾಗಾಗಿ ಪ್ರತಿಭಟನೆ ಹಾಗೂ ಜನರು ಗುಂಪು ಸೇರುವಂತಿಲ್ಲ. ಬಿಜೆಪಿ ಕಾರ್ಯಕರ್ತರು ನಿಯಮ ಮೀರಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.