ಪಶ್ಚಿಮಬಂಗಾಳ: ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಮತ್ತು ಅವರ ಪತ್ನಿ ಮೀರಾ ಭಟ್ಟಾಚಾರ್ಯರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಸದ್ಯ ಹೋಂ ಐಸೋಲೇಶನ್ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ.
ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯಗೆ ತಗುಲಿದ ಕೊರೊನಾ - west Bengal corona news
ಮಂಗಳವಾರ ಬೆಳಗ್ಗೆ ಬುದ್ಧದೇವ್ ಭಟ್ಟಾಚಾರ್ಯ ಮತ್ತು ಅವರ ಪತ್ನಿ ಮೀರಾ ಭಟ್ಟಾಚಾರ್ಯ ಅವರಿಗೆ ಕೊರೊನಾ ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ..
buddhadeb bhattacharya
ಮೀರಾ ಭಟ್ಟಾಚಾರ್ಯ ಅವರಿಗೆ ಕೊವಿಡ್-19 ಸೋಂಕು ಪತ್ತೆಯಾಗಿದ್ದು, ಮಂಗಳವಾರ ಸಂಜೆ ಅವರನ್ನು ಕೋಲ್ಕತಾದ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮಂಗಳವಾರ ಬೆಳಗ್ಗೆ ಬುದ್ಧದೇವ್ ಭಟ್ಟಾಚಾರ್ಯ ಮತ್ತು ಅವರ ಪತ್ನಿ ಮೀರಾ ಭಟ್ಟಾಚಾರ್ಯ ಅವರಿಗೆ ಕೊರೊನಾ ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ವೈದ್ಯರ ತಂಡ ಭಟ್ಟಾಚಾರ್ಯ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡುತ್ತಿದೆೆ ಎಂದು ಮೂಲಗಳು ತಿಳಿಸಿವೆ.