ಕರ್ನಾಟಕ

karnataka

ETV Bharat / briefs

ಶುರುವಾಯ್ತು ಸಚಿವಸ್ಥಾನದ ಲಾಬಿ, ನಮಗೂ ಕೊಡಿ ಎಂದ್ರು ಹಿಟ್ನಾಳ್

ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ವೇಳೆ ಕೊಪ್ಪಳದಿಂದ ಒಬ್ಬರಿಗಾದ್ರೂ ಸಚಿವ ಸ್ಥಾನ ನೀಡಬೇಕು ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಆಗ್ರಹಿಸಿದ್ದಾರೆ.

ಶಾಸಕ ರಾಘವೇಂದ್ರ ಹಿಟ್ನಾಳ್

By

Published : Jun 1, 2019, 5:57 PM IST

ಕೊಪ್ಪಳ:ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಅಥವಾ ಪುನರಚನೆಯಲ್ಲಿ ಭಯ್ಯಾಪೂರ ಅಥವಾ ನನಗೆ ಸಚಿವ ಸ್ಥಾನ ನೀಡಬೇಕಂದು ಹಿರಿಯ ನಾಯಕರಲ್ಲಿ ಮನವಿ ಮಾಡಿರುವುದಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.

ಶಾಸಕ ರಾಘವೇಂದ್ರ ಹಿಟ್ನಾಳ್ ಪ್ರತಿಕ್ರಿಯೆ

ತಾಲೂಕಿನ ಹುನಕುಂಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ನಮ್ಮ ಜಿಲ್ಲೆಗೂ ಅವಕಾಶ ನೀಡಬೇಕು ಎಂಬುದು ನಮ್ಮ ಬೇಡಿಕೆ. ನಾವೂ ಸಚಿವ ಸ್ಥಾನದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತೇವೆ. ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಹಾಗೂ ನನಗೆ ಇಬ್ಬರಲ್ಲಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಲು ಕೋರಿದ್ದೇವೆ ಎಂದು ಅಭಿಪ್ರಾಯ ಪಟ್ಟರು.

ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಇಲ್ಲಿನವರನ್ನೇ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಪಕ್ಷದ‌ ಮುಖಂಡರಿಗೆ ಕೇಳಿದ್ದೇವೆ. ಜತೆಗೆ ಇನ್ನೂ ಅನೇಕ ಹಿರಿಯ ಸಚಿವ ಸ್ಥಾನದ ಆಕಾಂಕ್ಷಿಗಳು ಇರುವುದರಿಂದ ಹೈಕಮಾಂಡ್​ ತೆಗೆದುಕೊಳ್ಳುವ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಅವರು ಸೂಚ್ಯವಾಗಿಯೇ ಹೇಳಿದರು.

ಜಿಲ್ಲೆಯ ಬಿಜೆಪಿ ಶಾಸಕರೊಬ್ಬರನ್ನು ಕಾಂಗ್ರೆಸ್ ಕರೆತರಲಾಗುತ್ತದೆ ಎಂಬುದೆಲ್ಲ ಸುಳ್ಳು. ಯಾರಾದರೂ ನಮ್ಮ ಸಿದ್ಧಾಂತ ಒಪ್ಪಿ ಬರುವಂತಿದ್ದರೆ ನೀವೇ ತಿಳಿಸಿ ಎಂದು ಹಿಟ್ಲಾಳ್ ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದರು.

ABOUT THE AUTHOR

...view details