ಅಮರಾವತಿ: ಲೋಕಸಭಾ ಚುನಾವಣೆ ಜೊತೆಜೊತೆಗೆ ಆಂಧ್ರಪ್ರದೇಶದಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲು ಮಾಡಿದ್ದು, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಜಗನ್ ಮೋಹನ್ ರೆಡ್ಡಿ ಸಿದ್ದರಾಗಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನಾಗಿ ಒಮ್ಮತದಿಂದ ಆಯ್ಕೆಯಾದ ಬಳಿಕ ಅವರು ಮಾತನಾಡಿದರು.2014ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ 23 ಶಾಸಕರನ್ನು ಚಂದ್ರಬಾಬು ನಾಯ್ಡು ಖರೀದಿಸಿದ್ದರು. ಇದೀಗ ಟಿಡಿಪಿ ಕೇವಲ 23 ಸ್ಥಾನಗಳನ್ನು ಪಡೆದುಕೊಂಡಿದೆ. ಅವರು ಮಾಡಿರುವ ತಪ್ಪಿಗೆ ದೇವರೇ ಶಿಕ್ಷೆ ನೀಡಿದ್ದಾನೆ ಎಂದು ಅವರು ಹೇಳಿದರು. ಇದೇ ವೇಳೆ ತಾವು ಉತ್ತಮ ಆಡಳಿತ ನೀಡುವುದಾಗಿಯೂ ರಾಜ್ಯದ ಜನರಿಗೆ ಭರವಸೆ ನೀಡಿದ್ದು, ಮುಂದಿನ ಒಂದೇ ವರ್ಷದಲ್ಲಿ ಜನರಿಂದ ಉತ್ತಮ ಸಿಎಂ ಎಂಬ ಬಿರುದು ಪಡೆದುಕೊಳ್ಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.