ರಾಯಚೂರು: ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಐಎಂಎ ವಂಚನೆ ಪ್ರಕರಣ: ಸಿಬಿಐ ತನಿಖೆಗೆ ಯತ್ನಾಳ್ ಒತ್ತಾಯ - undefined
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ಎಸ್ಐಟಿ ಗೆ ತನಿಖೆ ಹೊಣೆ ನೀಡಿದೆ.ಈ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜಕಾರಣಿಗಳು, ಪೊಲೀಸರು, ಅಧಿಕಾರಿಗಳು ಸಹ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಯತ್ನಾಳ
ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಆಸೆಗೆ ಬಿದ್ದು ಇಂತಹ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತಾರೆ. ಆದ್ರೆ ನಕಲಿ ಕಂಪನಿಗಳು ಅವರನ್ನು ಯಾಮಾರಿಸುತ್ತಿವೆ. ಐಎಂಎ ಅತಿ ದೊಡ್ಡ ವಂಚನೆ ಮಾಡಿದೆ ಎಂದರು.
ಅಲ್ಲದೆ, ಈ ವಂಚನೆಯಲ್ಲಿ ರಾಜಕಾರಣಿಗಳು, ಪೊಲೀಸರು, ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಯತ್ನಾಳ್ ಅವರು, ಈ ಪ್ರಕರಣವನ್ನ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದರು.