ಚಿಕ್ಕಮಗಳೂರು :ನಗರ ಹಾಗೂ ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದೂ ಕೂಡ ಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ.
ಮಲೆನಾಡು ಭಾಗದಲ್ಲಿ ವರುಣಾರ್ಭಟ: ಚಾರ್ಮಾಡಿ ಘಾಟಿಯಲ್ಲಿ ಸವಾರರ ಸಂಕಟ - ಚಿಕ್ಕಮಗಳೂರು ಮಳೆ ಪರಿಣಾಮ
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.
Heavy rain in chikkamagalore district
ಮಲೆನಾಡು ಭಾಗದಲ್ಲಿ ಕಳೆದ ಒಂದು ಗಂಟೆಯಿಂದ ಎಡೆಬಿಡದೆ ಮಳೆಯಾಗುತ್ತಿದ್ದು ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ, ಕೊಟ್ಟಿಗೆಹಾರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ಭಾಗಗಳಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ.
ಭಾರಿ ಗಾಳಿಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿರುವ ಪರಿಣಾಮ ಹಲವು ಭಾಗದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.