ಮಲೆನಾಡಿನಲ್ಲಿ ವರ್ಷಧಾರೆ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ - Chikkamagalore rain news
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದ್ದು, ಜನ ಜೀವನ ಮತ್ತು ವಾಹನ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ.
ಚಿಕ್ಕಮಗಳೂರು :ಜಿಲ್ಲಾಧ್ಯಂತ ಮೋಡ ಕವಿದ ವಾತಾವರಣವಿದ್ದು, ಮಲೆನಾಡು ಭಾಗದಲ್ಲಿ ಶುಕ್ರವಾರ ಸಂಜೆಯಿಂದ ವರುಣಾರ್ಭಟ ಪ್ರಾರಂಭವಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ, ಕಳೆದ ಒಂದು ಗಂಟೆಯಿಂದ ನಿರಂತರ ಮಳೆ ಸುರಿಯುತ್ತಿದ್ದು ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಸೇರಿದಂತೆ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರೆದಿದೆ.
ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಪರದಾಡುವಂತಾಗಿದ್ದು, ಮಲೆನಾಡು ಭಾಗದಲ್ಲಿ ಕೆಲ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ ಹಾಗೂ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.