ಬೆಂಗಳೂರು: ಐಎಂಎ ಹಗರಣದ ತನಿಖೆಯನ್ನು ಸಿಬಿಐ ವಶಕ್ಕೆ ಒಪ್ಪಿಸಬೇಕು ಎಂದು ಕೋರಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ರಿಟ್ ಅರ್ಜಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್.. ಐಎಂಎ ತನಿಖೆ ಸಂಬಂಧ ಸಿಬಿಐಗೆ ನೋಟಿಸ್ - undefined
ಹೂಡಿಕೆದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ, ಐಎಂಎ ಹಗರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಈ ಕುರಿತಂತೆ ನಗರದ ನಿವೃತ್ತ ತೆರಿಗೆ ಅಧಿಕಾರಿ ಇಕ್ಬಾಲ್ ಅಹ್ಮದ್ ಸೇರಿದಂತೆ 17 ಹೂಡಿಕೆದಾರರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.
ಪ್ರಕರಣವನ್ನು ರಾಜ್ಯ ಪೊಲೀಸರು ನಡೆಸಿದರೆ ವಂಚನೆಗೆ ಒಳಗಾಗಿರುವ ಹೂಡಿಕೆದಾರರಿಗೆ ನ್ಯಾಯ ಸಿಗುವುದಿಲ್ಲ. ಇದರಲ್ಲಿ ಹಲವು ಸಚಿವರು ಮತ್ತು ಶಾಸಕರೂ ಭಾಗಿಯಾಗಿದ್ದಾರೆ. ಆದ್ದರಿಂದ ಕೂಡಲೇ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. ನೊಂದವರ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಐಎಂಎ ಹಗರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.