ಹುಬ್ಬಳ್ಳಿ:ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ರಾಜ್ಯದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಕೋವಿಡ್ ಪೂರ್ವ ಸ್ಥಿತಿಗೆ ಸಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
ಕೋವಿಡ್ ಪೂರ್ವ ಸ್ಥಿತಿಯತ್ತ ಹುಬ್ಬಳ್ಳಿ ಏರ್ಪೋರ್ಟ್: ಪ್ರಹ್ಲಾದ್ ಜೋಶಿ ಸಂತಸ - ಹುಬ್ಬಳ್ಳಿ ವಿಮಾನ ನಿಲ್ದಾಣ
ಹುಬ್ಬಳ್ಳಿಯ ವಿಮಾನ ನಿಲ್ದಾಣ ರಾಜ್ಯದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಕೋವಿಡ್ ಪೂರ್ವಸ್ಥಿತಿಗೆ ಸಾಗುತ್ತಿದೆ ಎಂದು ತಿಳಿದು ಸಂತೋಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
ಕೋವಿಡ್ ಪೂರ್ವ ಸ್ಥಿತಿಯತ್ತ ಹುಬ್ಬಳ್ಳಿ ವಿಮಾನ ನಿಲ್ದಾಣ
ವರ್ಷಾಂತ್ಯದಲ್ಲಿ ನಾವು ಆ ಹೆಗ್ಗುರುತನ್ನು ಸಾಧಿಸುತ್ತೇವೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಬೆಳವಣಿಗೆಯನ್ನು ಎದುರು ನೋಡುವ ಭರವಸೆ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಇಂಡಿಗೋ, ಸ್ಟಾರ್ ಏರ್ ವಿಮಾನ ಸೇವೆ ಪ್ರಾರಂಭವಾಗಿದೆ. ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ಕಣ್ಣೂರು, ಹುಬ್ಬಳ್ಳಿ-ಹಿಂಡನ್ ಹಾಗೂ ಹಿಂಡನ್-ಹುಬ್ಬಳ್ಳಿ ಮಾರ್ಗದಲ್ಲಿ ಸಂಚಾರ ನಡೆಯುತ್ತಿದೆ.
Last Updated : Aug 30, 2020, 4:01 PM IST