ಕಾನ್ಪುರ್:ಸಕ್ರೀಯ ರಾಜಕಾರಣಕ್ಕೆ ಕಾಲಿಟ್ಟಾಗಿನಿಂದಲೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರಪ್ರದೇಶದಲ್ಲಿ ಅಬ್ಬರಿಸುತ್ತಿದ್ದಾರೆ. ನಿತ್ಯ ಅನೇಕ ರ‍್ಯಾಲಿಗಳಲ್ಲಿ ಭಾಗಿಯಾಗುತ್ತಿರುವ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಸಂಪೂರ್ಣ ಉತ್ತರಪ್ರದೇಶದ ಜವಾಬ್ದಾರಿ ವಹಿಸಿಕೊಂಡಿರುವ ಪ್ರಿಯಾಂಕಾ ಗಾಂಧಿ, ನಿನ್ನೆ ಕಾನ್ಪುರ್ದಲ್ಲಿ ನಡೆದ ರೋಡ್ ಶೋನಲ್ಲಿ ಭಾಗಿಯಾಗಿ ಮಾತನಾಡಿದ್ದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ನೇರವಾಗಿ ಆಕ್ರೋಶ ಹೊರಹಾಕಿದ ಪ್ರಿಯಾಂಕಾ, ಅದು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುವ ಬದಲು ಕೇವಲ ತನ್ನ ಏಳಿಗೆಗಾಗಿ ಶ್ರಮಿಸುತ್ತದೆ ಎಂದರು.
ಇದೇ ವೇಳೆ ಇಂದಿರಾ ಗಾಂಧಿ ಜತೆ ತಮ್ಮ ಹೋಲಿಕೆ ಬೇಡ ಎಂದ ಪ್ರಿಯಾಂಕಾ, ಅವರ ಮುಂದೆ ಏನು ಅಲ್ಲ. ಆದರೆ ನಾನು ನನ್ನ ಸಹೋದರ ಅವರ ಹೃದಯದಲ್ಲಿರಲು ಬಯಸುತ್ತೇವೆ ಎಂದರು. ಅವರ ಹಾಗೇ ನಾನು ಕೆಲಸ ಮಾಡುವೆ ಎಂದ ಪ್ರಿಯಾಂಕಾ, ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದವರನ್ನ ಬೆಂಬಲಿಸುವಂತೆ ಮನವಿ ಮಾಡಿಕೊಂಡರು.
ಲೋಕಸಭಾ ಚುನಾವಣೆಗೂ ಮುನ್ನ ಸಕ್ರೀಯ ರಾಜಕಾರಣಕ್ಕೆ ಕಾಲಿಟ್ಟಿರುವ 47 ವರ್ಷದ ಪ್ರಿಯಾಂಕಾ ಉತ್ತರಪ್ರದೇಶ ಪೂರ್ವ ವಲಯದ ಉಸ್ತುವಾರಿಯಾಗಿ ಕೂಡ ನೇಮಕಗೊಂಡಿದ್ದು, ಅನೇಕ ಚುನಾವಣಾ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡುವ ಲೋಕಸಭಾ ಕ್ಷೇತ್ರ ವಾರಣಾಸಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಸಹ ಕೇಳಿ ಬಂದಿದೆ.