ಹಾವೇರಿ: ಜಿಲ್ಲೆಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ ಎಂದು ಹಿಂದೂಪರ ಸಂಘಟನೆಗಳ ಹಾವೇರಿ ಮುಖ್ಯಸ್ಥ ಎಸ್.ಆರ್.ಹೆಗಡೆ ಆರೋಪಿಸಿದ್ದಾರೆ.
ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳ ಒತ್ತಾಯ - arrest the accused
ಜಿಲ್ಲೆಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ ಎಂದು ಹಿಂದೂಪರ ಸಂಘಟನೆಗಳ ಹಾವೇರಿ ಮುಖ್ಯಸ್ಥ ಎಸ್.ಆರ್.ಹೆಗಡೆ ಆರೋಪಿಸಿದ್ದಾರೆ.
ಹಿಂದೂಪರ ಸಂಘಟನೆಗಳ ಹಾವೇರಿ ಮುಖ್ಯಸ್ಥ ಎಸ್.ಆರ್.ಹೆಗಡೆ
ಹಾವೇರಿಯಲ್ಲಿ ಮಾತನಾಡಿದ ಅವರು, ಈ ಕುರಿತಂತೆ ಪೊಲೀಸ್ ಇಲಾಖೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸ್ ಇಲಾಖೆ ಇದೇ ರೀತಿ ನಿರ್ಲಕ್ಷ್ಯ ಮುಂದುವರಿಸಿದರೆ ಜಿಲ್ಲಾ ಬಂದ್‌ಗೆ ಕರೆ ಕೊಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಅಕ್ರಮ ಕಸಾಯಿಖಾನೆಗಳ ತಡೆಗೆ ಮುಂದಾದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಮಂಗಳವಾರ ಹಲ್ಲೆ ನಡೆದಿದೆ. ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದರೆ ಉಗ್ರ ಹೋರಾಟ ಮಾಡುವುದಾಗಿ ಹೇಳಿದರು.