ಬೆಂಗಳೂರು:ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ನಲ್ಲಿ ರೈತರಿಗಾದ ಅನುಕೂಲವೇನು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರಶ್ನಿಸಿದರು.
ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕಿತ್ತು. ಅಸಂಘಟಿತ ಕಾರ್ಮಿಕರ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಗುಡುಗಿದ ಅವರು, ಪ್ರಸ್ತುತ ಕೋಟ್ಯಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಪ್ಯಾಕೇಜ್ ಘೋಷಿಸಿದರೆ ಸಾಲದು ಶೀಘ್ರ ಅನುಷ್ಠಾನಗೊಳಿಸಬೇಕು ಎಂದರು.
ಕಾರ್ಮಿಕರು ನೂರಾರು ಕಿ.ಮೀ ಕಾಲ್ನಡಿಗೆ ಮೂಲಕವೇ ಊರುಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಅದರಲ್ಲಿ ಗರ್ಭಿಣಿಯರೂ ಸೇರಿದ್ದಾರೆ. ಅವರಿಗೆ ಯಾವ ಪ್ಯಾಕೇಜ್ ಘೋಷಿಸಲಾಗಿದೆ. ಕೇಂದ್ರ ಜನರ ನಿರೀಕ್ಷೆಗೆ ತಕ್ಕಂತೆ ಪ್ಯಾಕೇಜ್ ಘೋಷಿಸಿಲ್ಲ ಎಂದು ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದಲ್ಲಿ ಖಜಾನೆ ಖಾಲಿಯಾಗಿದೆ. ಶಿಕ್ಷಕರಿಗೆ ವೇತನ ಸೇರಿದಂತೆ ಯಾವುದೇ ಕೆಲಸಕ್ಕೂ ಆರ್ಥಿಕ ನೆರವು ಬಿಡುಗಡೆ ಮಾಡಿಲ್ಲ. ಇಂತಹ ಸಂದರ್ಭದಲ್ಲಿ ಕೇಂದ್ರ ರಾಜ್ಯದತ್ತ ತಿರುಗಿ ನೋಡಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನ ನೀಡಿಲ್ಲ. ಐಟಿ - ಬಿಟಿ ರಾಜ್ಯ ನಮ್ಮದು. ಹೆಚ್ಚಿನ ತೆರಿಗೆಯನ್ನ ಕೇಂದ್ರಕ್ಕೆ ಕೊಡುವವರು ನಾವು. ಆದರೆ, ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. 25 ಸಂಸದರಿದ್ದರೂ ಪ್ರಯೋಜನವಿಲ್ಲ ಎಂದರು.
ಎಂಎಸ್ಇಪಿಗೆ ₹ 3 ಲಕ್ಷ ನೆರವು ಘೋಷಿಸಿದೆ. ಈ ಹಣವನ್ನ ಮುಂದೆಯಾದರೂ ಕಟ್ಟಲೇಬೇಕಿದೆ. ಕೊರೊನಾ ಪರಿಹಾರ ವಿತರಣೆಯಲ್ಲಿ ಕೇಂದ್ರ ಸಂಪೂರ್ಣ ವಿಫಲವಾಗಿದೆ. 'ಕೊಲಾ ಪಹಾಡ್ ತೋ ಚೋರ್ ನಿಕಲಾ' ಅನ್ನುವಂತಾಗಿದೆ. ಬರೀ ಮಾಯಾಬಜಾರ್ ತೋರಿಸಿ ಜನರನ್ನ ಯಾಮಾರಿಸುತ್ತಿದೆ. ಕೇವಲ ಉದ್ಯಮಿಗಳಿಗೆ ಮಾತ್ರ ನೆರವು ಘೋಷಿಸಿದೆ. ರೈತ, ಕೃಷಿ ಕಾರ್ಮಿಕ, ಕಾರ್ಮಿಕರನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
'ಎಪಿಎಂಸಿ ತಿದ್ದುಪಡಿ ಬೇಡ':