ಬೆಂಗಳೂರು: ಕೆ. ಆರ್. ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ (ಕೇಂದ್ರ) ಸ್ವಾಮ್ಯದ ಐಟಿಐ ಆಸ್ಪತ್ರೆಯನ್ನು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಪುನಶ್ಚೇತನಗೊಳಿಸಿ ತಾತ್ಕಾಲಿಕವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಈಗಾಗಲೇ ಸಂಬಂಧಪಟ್ಟ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದು ಅಗತ್ಯ ಸಹಕಾರ ದೊರೆಯುವ ವಿಶ್ವಾಸವಿದೆ. ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರುವ ಆಸ್ಪತ್ರೆಗಳು ಸಾಲುತ್ತಿಲ್ಲ. ಹೆಚ್ಚೆಚ್ಚು ತಾತ್ಕಾಲಿಕ ಕೋವಿಡ್ ಕೇಂದ್ರಗಳನ್ನು ಕಲ್ಪಿಸುವುದು ಅನಿವಾರ್ಯವಾಗಿದೆ. ಕೆ.ಆರ್ ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಐಟಿಐ ಆಸ್ಪತ್ರೆಯು ವಿಸ್ತಾರವಾದ ಸ್ಥಳಾವಕಾಶ ಹೊಂದಿದೆ. ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಸ್ಥಳೀಯ ಶಾಸಕರೂ ಆಗಿರುವ ಅವರು ಈ ಬಗ್ಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಆಕ್ಸಿಜಿನೇಟೆಡ್ ಹಾಸಿಗೆಗಳು, ತೀವ್ರ ನಿಗಾ ಘಟಕ ಸೇರಿದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಶುಶ್ರೂಷಾ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಸ್ಯಾನಿಟೈಸೇಷನ್: