ನವದೆಹಲಿ:ಕಣಿವೆ ರಾಜ್ಯದ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಯತ್ತ ಬರುತ್ತಿರುವ ವೇಳೆಯಲ್ಲೇ ಮತ್ತೊಂದು ಉಗ್ರ ಕೃತ್ಯದ ಸಾಧ್ಯತೆ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಿಗೆ ಮಾಹಿತಿ ರವಾನಿಸಿದೆ.
ಪಾಕಿಸ್ತಾನದ ಗುಪ್ತಚರ ಇಲಾಖೆಯ ಮಾಹಿತಿಯಂತೆ ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಮುಂದಿನ ದಿನಗಳಲ್ಲಿ ಭಯೋತ್ಪಾದಕರು ವಿಧ್ವಂಸಕ ಕೃತ್ಯ ಎಸಗಲಿದ್ದಾರೆ ಎಂದು ಭಾರತವನ್ನು ಎಚ್ಚರಿಸಿದೆ.
ಪುಲ್ವಾಮಾ ದಾಳಿಯ ಬಳಿಕ ಭಾರತ ನಡೆಸುತ್ತಿರುವ ಉಗ್ರ ನಿರ್ಮೂಲನಾ ಹೋರಾಟದಲ್ಲಿ ಲಷ್ಕರ್-ಇ-ತೊಯ್ಬಾ ಹಾಗೂ ಜೈಶೆ ಮೊಹಮ್ಮದ್ ಸಂಘಟನೆಯ ಟಾಪ್ ಕಮಾಂಡರ್ಗಳು ಹತ್ಯೆಯಾಗಿದ್ದಾರೆ. ಇದೇ ವಿಚಾರಕ್ಕೆ ಈ ಪ್ರಮುಖ ಉಗ್ರ ಸಂಘಟನೆಗಳು ಮುಂದಿನ ದಿನದಲ್ಲಿ ಪ್ರತೀಕಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ತನ್ನ ಗುಪ್ತಚರ ಮಾಹಿತಿಯನ್ನು ಭಾರತಕ್ಕೆ ರವಾನಿಸಿದೆ.
ಗುಪ್ತಚರ ಮಾಹಿತಿಯ ಬಳಿಕ ಉಭಯ ದೇಶಗಳ ಗಡಿಯಲ್ಲಿ ಭದ್ರತೆ ಹೆಚ್ಚಿಸಿ, ತೀವ್ರ ನಿಗಾ ವಹಿಸಲಾಗಿದೆ. ಉಗ್ರಕೃತ್ಯದ ಸಾಧ್ಯತೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.